Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ
ಕರ್ನಾಟಕಪ್ರಮುಖ

Basavaraja rayaraddy ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯವೇ ನಡೆಯುತ್ತಿಲ್ಲ: ಕಾಂಗ್ರೆಸ್ ಶಾಸಕ ಬಸವರಾಜ ರಾಯರಡ್ಡಿ ಹೇಳಿಕೆ

Share
1 Min Read
SHARE

newsics.com

ಕೊಪ್ಪಳ: ಭ್ರಷ್ಟಾಚಾರದಲ್ಲಿ ಈಗ ಕರ್ನಾಟಕ ನಂಬರ್ ಒನ್ ಆಗಿದ್ದು, ಇದರಿಂದ ರಾಜ್ಯದಲ್ಲಿ ಯಾವುದೇ ಗುಣಮಟ್ಟದ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಶಾಸಕ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ.

ಯಾವುದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತದೆ. ಭ್ರಷ್ಟಾಚಾರದಲ್ಲಿ ಕರ್ನಾಟಕವೇ ನಂಬರ್‌ ಒನ್‌ ಆಗಿದೆ ಎಂದು ಅವರು ಹೇಳಿದ್ದಾರೆ.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಭ್ರಷ್ಟಾಚಾರ ವ್ಯಾಪಕವಾಗಿರುವುದರಿಂದಲೇ ಗುಣಮಟ್ಟದ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದಿದ್ದಾರೆ.

ಐದಾರು ದಶಕ ಬಾಳಿಕೆ ಬರುತ್ತಿದ್ದ ಸರ್ಕಾರಿ ಕಟ್ಟಡಗಳು ಹತ್ತು ವರ್ಷಗಳಲ್ಲಿಯೇ ಬಿದ್ದು ಹೋಗುತ್ತಿವೆ. ಅದರಲ್ಲೂ ಕಲ್ಯಾಣ ಕರ್ನಾಟಕದಲ್ಲಿ ಭ್ರಷ್ಟಾಚಾರ ಹೆಚ್ಚು ತಾಂಡವವಾಡುತ್ತಿದೆ ಎಂದು ಬಸವರಾಜ ರಾಯರಡ್ಡಿ ಹೇಳಿದರು.

ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವಾಗ ಪ್ರಾದೇಶಿಕ ಅಸಮತೋಲನ ನಿವಾರಣೆ ಹೇಗೆ ಸಾಧ್ಯ? ಜನಪ್ರತಿನಿಧಿಗಳು ಹೇಗೆ ಇರುತ್ತಾರೊ ಅದರಂತೆ ಅಧಿಕಾರಿಗಳೂ ಇರುತ್ತಾರೆ. ಮುಖ್ಯಮಂತ್ರಿ ಏನೇ ಹೇಳಿದರೂ ಭ್ರಷ್ಟಾಚಾರ ಕುರಿತು ನನ್ನ ಅಭಿಪ್ರಾಯ ಇದೇ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

22 ವರ್ಷಗಳಷ್ಟು ಹಳೆಯದಾದ ಡಿ.ಎಂ.ನಂಜುಂಡಪ್ಪ ವರದಿ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ. ಭ್ರಷ್ಟಾಚಾರದ ಕುರಿತು ಹೇಳಿಕೆಯನ್ನು ನನ್ನ ಹೆಸರನ್ನು ಉಲ್ಲೇಖಿಸಿಯೇ ಶಿಫಾರಸಿನಲ್ಲಿ ಸೇರಿಸಿ ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ವಿಶಾಲ್ ಆರ್. ಅವರಿಗೆ ಇದೇ ವೇಳೆ ಹೇಳಿದರು.

P CHIDAMBARAM : ಬಿಸಿಲಿನ ತಾಪಕ್ಕೆ ಪ್ರಜ್ಞೆ ತಪ್ಪಿಬಿದ್ದ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ: ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ

POLICE WARNING : ಬೇಸಿಗೆ ರಜೆ ಬಂತೆಂದು ಕುಟುಂಬ ಸಮೇತ ಪ್ರವಾಸಕ್ಕೆ ಹೋಗುವವರೆ ಹುಷಾರ್‌: ಕಮಿಷನರ್‌ ಎಚ್ಚರಿಕೆ

TAGGED:Karnataka number one in corruption: No development work is happening in the state: Congress MLA Basavaraj Rayareddy's statement
Share This Article
Facebook Twitter Copy Link Print
Previous Article Hyderabad bomb blast ಹೈದರಾಬಾದ್‌ ಬಾಂಬ್‌ ಸ್ಫೋಟ: ಮರಣದಂಡನೆ ಶಿಕ್ಷೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್‌
Next Article Actor Shivaraj kumar ನನ್ನ-ಸುದೀಪ್ ಮಧ್ಯೆ ಮನಸ್ತಾಪ ಇರಬಹುದು, ದ್ವೇಷವಿಲ್ಲ: ನಟ ಶಿವರಾಜ್ ಕುಮಾರ್

Popular Posts

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

You Might Also Like

ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read
ದೇಶಕರ್ನಾಟಕಪ್ರಮುಖ

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read
ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Social Networks

Facebook-f Instagram Twitter
Welcome Back!

Sign in to your account

Lost your password?