newsics.com
ಚಂಡೀಗಢ: ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಬಿಸಿಸಿ ಪಂದ್ಯದ ಶೇ.25 ರಷ್ಟು ದಂಡ ವಿಧಿಸಿದೆ.
ಪಂಜಾಬ್‌ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏ.8 ರಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆ ಬಿಸಿಸಿಐ ಪಂದ್ಯದ ಶೇ.25 ರಷ್ಟು ಶುಲ್ಕ ಪಾವತಿಸುವಂತೆ ದಂಡ ಹಾಗೂ ಒಂದು ಡಿಮೆರಿಟ್ ಪಾಯಿಂಟ್ ನೀಡಿದೆ.
ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಬಿಸಿಸಿಐ ನಿಖರವಾದ ಕಾರಣ ತಿಳಿಸಿಲ್ಲ, ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2ರ ಅಡಿಯಲ್ಲಿ ಲೆವೆಲ್ 1 ಅಪರಾಧವನ್ನು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಹಾಗೂ ಮ್ಯಾಚ್ ರೆಫರಿಯ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ ಎಂದು ತಿಳಿಸಿದೆ.