newsics com
ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಬೇರೆ ರಾಜ್ಯದಿಂದ ಸಾವಿರಾರು ಪ್ರವಾಸಿಗರು ಆಗಮಿಸ್ತಾರೆ. ಹೀಗೆ ಆಗಮಿಸುವ ಭಕ್ತರು ದೇವಾಲಯದ ಎದುರು ಫೋಟೋ ಕ್ಲಿಕ್ಕಿಸಿ ಹೋಗೋದು ಸಾಮಾನ್ಯ. ಆದ್ರೆ ಇತ್ತೀಚಿನ ದಿನಗಳಲ್ಲಿ ದೇವಾಲಯದ ಆವರಣದಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಮಾಡಿ ಮುಜುಗರ ಉಂಟು ಮಾಡಿದೆ. ಹೀಗಾಗಿ ಉಡುಪಿ ಶ್ರೀಕೃಷ್ಣ ಮಠದ ರಥ ಬೀದಿಯಲ್ಲಿ ಪ್ರಿ ವೆಡ್ಡಿಂಗ್, ಪೋಸ್ಟ್ ವೆಡ್ದಿಂಗ್ ಫೋಟೋ ಶೂಟ್ ನಿಷೇಧಿಸಲಾಗಿದೆ.
ಈ ಬಗ್ಗೆ ಪರ್ಯಾಯ ಪುತ್ತಿಗೆ ಮಠ ಪ್ರಕಟಣೆ ಹೊರಡಿಸಿದೆ. ಶ್ರೀಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದ್ದು,
ಫೋಟೋ ಶೂಟ್ ನಿಂದಾಗಿ ಸ್ವಾಮೀಜಿಗಳ ಓಡಾಟಕ್ಕೆ ಹಾಗೂ ಮುಂಜಾನೆ ಮುಜುಗರದ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದನ್ನು ತಪ್ಪಿಸಲು ಮಠ ಈ ನಿರ್ಧಾರ ಕೈಗೊಂಡಿದೆ. ಶ್ರೀಕೃಷ್ಣಮಠ ಪಾರಂಪರಿಕ ಕಟ್ಟಡಗಳಿರುವ ತಾಣ. ಪ್ರಿ ವೆಡ್ದಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಹೆಸರಿನಲ್ಲಿ ಬೆಳ್ಳಂಬೆಳಿಗ್ಗೆ ಮಠದ ಆವರಣದಲ್ಲಿ ಅಸಭ್ಯ ವರ್ತನೆ ಕಾಣುತ್ತದೆ. ಫೋಟೋಶೂಠ್ ಹೆಸರಲ್ಲಿ ಮಠದ ರಥಬೀದಿಯಲ್ಲಿ ಸರಸ ಸಲ್ಲಾಪ ನಡೆಯುತ್ತಿದೆ.
https://www.newsics.com/2025/04/10/a-dumb-animal-saved-a-dying-dogs-life-by-donating-blood/