newsics.com
ಬೆಂಗಳೂರು: ಪರವಾನಗಿ ಭೂಮಾಪಕರ ಖಾಯಂ ಮಾಡಲು ಕ್ರಮ ಕೈಗೊಳ್ಳಲಾಗುವುದು ಜೊತೆಗೆ 36 ಎಡಿಎಲ್ಆರ್ ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.
https%3A%2F%2Fd-3929333642522653612.ampproject.net%2F2503242227000%2Fframe.htmlhttps://www.newsics.com/2025/04/10/a-fight-between-the-braids-over-the-same-cloth/