newsics.com
ಚೆನ್ನೈ: ಬಿಜೆಪಿ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದ ಅಮಿತ್ ಶಾ , ಎಐಎಡಿಎಂಕೆ ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ-ಎಐಎಡಿಎಂಕೆ ಮುಂಬರುವ ಮೈತ್ರಿ ಚುನಾವಣೆ ಎದುರಿಸಲಿದೆ ಎಂದು ತಿಳಿಸಿದ್ದಾರೆ. ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಕೂಡ ಅಮಿತ್ ಶಾ ಮತ್ತು ಪಳನಿಸ್ವಾಮಿ ಅವರೊಂದಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಐಎಡಿಎಂಕೆಯಿಂದ ಡಿಮ್ಯಾಂಡೂ ಇಲ್ಲ, ಕಂಡೀಷನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 2026ರಲ್ಲಿ ತಮಿಳುನಾಡಿನಲ್ಲಿ ಎನ್ಡಿಎಗೆ ಬಹುಮತ ಸಿಗಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.
https://www.newsics.com/2025/04/11/attendant-becomes-director-of-company-without-knowing-it/