newsics.com
ಯಾದಗಿರಿ: ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿಯಾಗಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಯಾದಗಿರಿ ತಾಲೂಕಿನ ವರ್ಕನಹಳ್ಳಿ ಗ್ರಾಮದವರಾದ ಬುಲೆರೊ ಚಾಲಕ ಶರಣಪ್ಪ(30), ಸುನೀತಾ(19), ಸೋಮವ್ವ(50) ಮತ್ತು ತಂಗಮ್ಮ(55) ಮೃತ ದುರ್ದೈವಿಗಳು.ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವಸ್ಥಾನಕ್ಕೆ ಜವಳ ಕಾರ್ಯಕ್ಕೆ ಕುಟುಂಬಸ್ಥರು ಹೋಗುತ್ತಿದ್ದಾಗ ಸಂಭವಿಸಿದೆ. ಬುಲೆರೋ ವಾಹನದಲ್ಲಿದ್ದ ಇನ್ನು ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
https://www.newsics.com/2025/04/11/teacher-falls-asleep-at-school/