newsics.com
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಪಾತ್ರವಹಿಸಿರುವ ಜಾರಿ ನಿರ್ದೇಶನಾಲಯ ಇದೀಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
ಇದಕ್ಕೂ ಮುನ್ನ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ದೆಹಲಿ, ಮುಂಬೈ ಮತ್ತು ಲಕ್ನೋದಲ್ಲಿರುವ 661 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ನೋಟಿಸ್ ಕೂಡ ಜಾರಿ ಮಾಡಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪ್ರಕಟಿಸುವ ಎಜೆಎಲ್ ಮತ್ತು ಪತ್ರಿಕೆಯ ಮಾಲೀಕತ್ವದ ಯಂಗ್ ಇಂಡಿಯನ್ ವಿರುದ್ಧದ ಪಿಎಂಎಲ್‌ಎ (ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ) ಪ್ರಕರಣದಲ್ಲಿ ಇಡಿ ಈ ಹಿಂದೆ ತಾತ್ಕಾಲಿಕ ಜಪ್ತಿ ಆದೇಶವನ್ನು ಹೊರಡಿಸುವ ಮೂಲಕ ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು.
https://www.newsics.com/2025/04/15/satellite-based-toll-collection-in-india-from-may-1/