newsics.com
ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ಉದ್ಯಮಿ ರಾಬರ್ಟ್ ವಾದ್ರಾ ಗೆ ಅವರು ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಇಂದು ಹಾಜರಾಗಿದ್ದಾರೆ.
ಗುರು ಗ್ರಾಮ್‌ನಲ್ಲಿ ಕಡಿಮೆ ಬೆಲೆಗೆ ಭೂಮಿ ಖರೀದಿಸಿ, ಅತಿ ಹೆಚ್ಚು ಬೆಲೆಗೆ ಜಮೀನು ಮಾರಾಟ ಮಾಡಿದ ಆರೋಪ ಅವರ ಮೇಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಏ.8 ರಂದು ಸಮನ್ಸ್ ನೀಡಲಾಗಿತ್ತು. ಅಂದು ವಿಚಾರಣೆಗೆ ಗೈರಾದ ಹಿನ್ನಲೆ ಮತ್ತೊಂದು ಸಮನ್ಸ್ ಜಾರಿ ಮಾಡಲಾಗಿದೆ.
ಇದು 2018 ರ ಪ್ರಕರಣವಾಗಿದ್ದು. ಗುರುಗ್ರಾಮದಲ್ಲಿ ಸ್ಕೈಲೈಟ್ ಹಾಸ್ಪಿಟಾಲಿಟಿ ಮತ್ತು ಡಿಎಲ್ಎಫ್ ನಡುವೆ 3.5 ಎಕರೆ ಭೂಮಿ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ.