newsics.com
ಬೆಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೇ ಮೊದಲ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ
ಈಗಾಗಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜಿಲ್ಲಾ ಕೇಂದ್ರಗಳಲ್ಲಿ ಪ್ರಗತಿಯಲ್ಲಿದೆ. ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆ 1 ಕ್ಕೆ 15,881 ಶಾಲೆಗಳ 8,96,447 ವಿದ್ಯಾರ್ಥಿಗಳು ಹಾಜರಾಗಿದ್ದು, 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಕರ್ನಾಟಕ ಎಸ್‌ಎಸ್‌ಎಲ್‌ಸಿ (10ನೇ ತರಗತಿ ) ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಅಂದರೆ https://kseab.karnataka.gov.in ಅಥವಾ https://karresults.nic.in/ ಗಳಲ್ಲಿ ಪ್ರಕಟಿಸುತ್ತದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
- karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.
https://www.newsics.com/2025/04/16/company-gives-four-days-off-a-week-to-have-a-baby/