newsics.com
ನವದೆಹಲಿ: ದಿನದಿಂದ ದಿನಕ್ಕೆ ಚಿನ್ನದ ದರದಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಚಿನ್ನದ ದರ ಮತ್ತೆ ಗಗನಕ್ಕೇರಿದ್ದು, ಭಾರತದಲ್ಲಿ ಚಿನ್ನದ ಬೆಲೆ ಐತಿಹಾಸಿಕ ಮಟ್ಟಕ್ಕೆ ಏರಿಕೆಯಾಗಿದೆ.
22 ಕ್ಯಾರೆಟ್ನ 1 ಗ್ರಾಂ ಚಿನ್ನದ ದರ 8,720 ಇದ್ದು 95 ರೂಪಾಯಿ ಏರಿಕೆ ಆಗಿದೆ.
22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 88,150 ಆಗಿದ್ದು ಬರೋಬ್ಬರಿ 950 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆ ಇಂದು 9,617 ರೂಪಾಯಿ ಆಗಿದೆ. ಬೆಲೆಯಲ್ಲಿ 99 ರೂಪಾಯಿ ಅಧಿಕ ಕಂಡಿದೆ.
24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಇಂದು 96,170 ರೂಪಾಯಿ ಆಗಿದೆ. ಬೆಲೆಯಲ್ಲಿ 990 ರೂಪಾಯಿ ಏರಿಕೆ ಆಗಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿಶ್ವದ ರಾಷ್ಟ್ರಗಳ ಮೇಲೆ ಅಧಿಕ ಸುಂಕ ವಿಧಿಸುತ್ತಿರುವುದು ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಚಿನ್ನದ ದರ ಸರ್ವಕಾಲಿಕ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿದೆ
https://www.newsics.com/2025/04/16/air-hostess-turns-safety-lesson-into-comedy/