newsics.com
ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವದ ವಿರುದ್ಧದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ವಕ್ಫ್ (ತಿದ್ದುಪಡಿ) ಕಾಯ್ದೆ ಸಂಪೂರ್ಣ ತಡೆ ನೀಡಲು ನಿರಾಕರಿಸಿದೆ.
ವಕ್ಫ್ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ ನಡೆಸಿತು. ಕೇಂದ್ರ ಸರ್ಕಾರವು ತನ್ನ ಪ್ರತಿಕ್ರಿಯೆಯನ್ನು ಒಂದು ವಾರದೊಳಗೆ ಸಲ್ಲಿಸಬೇಕೆಂದು ಕೋರ್ಟ್ ಸೂಚಿಸಿದೆ. ಅರ್ಜಿದಾರರಿಗೆ ಕೇಂದ್ರದ ಪ್ರತಿಕ್ರಿಯೆಯನ್ನು ಪರಿಶೀಲಿಸಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಮೇ 5ಕ್ಕೆ ನಿಗದಿಪಡಿಸಲಾಗಿದೆ.
ಮುಂದಿನ ವಿಚಾರಣೆಯಲ್ಲಿ ಐದು ಅರ್ಜಿದಾರರ ವಾದ ಆಲಿಸಲಿದ್ದೇವೆ. ಐದು ಅರ್ಜಿದಾರರು ಯಾರು ನೀವೆ ಆಯ್ಕೆ ಮಾಡಿ ಎಂದ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ಆಯ್ಕೆಯನ್ನು ಬಿಟ್ಟಿದೆ. ಇನ್ನು ಇದೇ ವೇಳೆ ಮುಂದಿನ ವಿಚಾರಣೆಯವರೆಗೆ ‘ವಕ್ಫ್ ಬೈ ಡೀಡ್’ ಮತ್ತು ‘ಬಳಕೆದಾರರಿಂದ ವಕ್ಫ್’ ಅನ್ನು ಡಿನೋಟಿಫೈ ಮಾಡುವುದಿಲ್ಲ ಎಂದು ಕೇಂದ್ರವು ಸುಪ್ರೀಂಗೆ ಭರವಸೆ ನೀಡಿದೆ.