newsics.com
ಕಿಚ್ಚ ಸುದೀಪ್ ನಟನೆಯ ‘ಬಿಲ್ಲ ರಂಗ ಬಾಷ’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಈ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಇದೀಗ ಕಿಚ್ಚ ಸುದೀಪ್ ಅವರ ವಿಶಿಷ್ಟ ಲುಕ್ ಇರುವ ಪೋಸ್ಟರ್ ಬಿಡುಗಡೆ ಮಾಡಿದೆ.
ಬೆಂಗಳೂರಿನಲ್ಲಿ ಸಿದ್ಧಗೊಳಿಸಲಾಗಿರುವ ಸೆಟ್‌ನಲ್ಲಿ ಚಿತ್ರೀಕರಣ ಆರಂಭವಾಗಿದೆ.
ಈ ಕುರಿತು ಕಿಚ್ಚ ಸುದೀಪ್, ‘ಪ್ರಯಾಣ ಇವತ್ತಿನಿಂದ ಶುರುವಾಗಿದೆ. ಇದೊಂದು ಬಹಳ ದೊಡ್ಡ ಕನಸಾಗಿದೆ. ಸಂಭ್ರಮದಿಂದ ಚಿತ್ರೀಕರಣ ಆರಂಭಿಸುತ್ತಿದ್ದೇವೆ’ ಎಂದು ಹೇಳಿದ್ದಾರೆ.
ಮೊದಲ ಹಂತದಲ್ಲಿ ಚಿತ್ರದ ಪ್ರಮುಖ ಆ್ಯಕ್ಷನ್ ದೃಶ್ಯಗಳನ್ನು ಶೂಟ್ ಮಾಡಲಿದ್ದೇವೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್‌ಗಳನ್ನು ಹಾಕಿದ್ದೇವೆ. ನಂತರ ಸಣ್ಣ ಬ್ರೇಕ್ ತೆಗೆದುಕೊಂಡು ಮುಂದಿನ ಹಂತದ ಚಿತ್ರೀಕರಣಕ್ಕೆ ರೆಡಿಯಾಗುತ್ತೇವೆ ಎಂದು ಹೇಳಿದ್ದಾರೆ.
ಈ ಸಿನಿಮಾದಲ್ಲಿ ನನ್ನ ಹಿಂದಿನ ಚಿತ್ರಗಳಂತೆ ತುಳುನಾಡು, ದೈವದಂಥಾ ಸನ್ನಿವೇಶಗಳಿರುವುದಿಲ್ಲ. ಆದರೆ ಭಾರತೀಯ ಹಿನ್ನೆಲೆಯಲ್ಲೇ ಸಿನಿಮಾ ಕಾಣಿಸಿಕೊಳ್ಳಲಿದೆ’ ಎಂದು ಅನೂಪ್ ಹೇಳಿದ್ದಾರೆ.
https://www.newsics.com/2025/04/17/supreme-court-refuses-to-stay-amendment-to-waqf-act/