ಭಟ್ಕಳ(ಉತ್ತರ ಕನ್ನಡ): ಗಬ್ಬದ ಹಸುವನ್ನು ಹತ್ಯೆಗೈದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ನದಿಗೆ ಬಿಸಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಹೆಬಳೆಯ ಕುಕ್ ನೀರ್ಬಳಿಯಲ್ಲಿ ಗಬ್ಬದ ಹಸು ಕಡಿದ ದುರುಳರು ಹೊಟ್ಟೆಯೊಳಗಿದ್ದ ಕರು ಮತ್ತು ಗೋವಿನ ಬಾಲವನ್ನು ವೆಂಕಟಾಪುರ ನದಿಯಂಚಿನಲ್ಲಿ ಎಸೆದು ಗೋಮಾಂಸದೊಂದಿಗೆ ಪರಾರಿಯಾಗಿದ್ದಾರೆ.
ಗೋವಿನ ಹೊಟ್ಟೆಯೊಳಗಿದ್ದ ಪುಟ್ಟ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಬಿಸಾಡಿದ್ದಾರೆ. ಗುರುವಾರ ಬೀದಿ ನಾಯಿಯೊಂದು ಚೀಲವನ್ನು ಎಳೆಯುತ್ತಿರುವಾಗ ಸ್ಥಳೀಯರು ನೋಡಿ ಪರಿಶೀಲಿಸಿದ್ದಾರೆ.ಆಗ ಸತ್ತ ಕರು ಇರುವುದು ಪತ್ತೆಯಾಗಿದೆ. ಜೊತೆಗೆ ಹಸುವಿನ ಬಾಲ ಕೂಡ ಅಲ್ಲಿಯೇ ಕಂಡುಬಂದಿದೆ. ತಕ್ಷಣ ಗ್ರಾಮೀಣ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.
ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://www.newsics.com/2025/04/18/there-is-no-cet-for-january/