newsics.com
ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಕೇಶ್ಮಲ್ಲಿ, 2ನೇ ಪತ್ನಿ ಅನುರಾಧ, ನಿತೇಶ್ ಶೆಟ್ಟಿ, ವೈದ್ಯನಾಥನ್ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 173 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಸ್ಪತ್ರೆಗೆ ದಾಖಲಾಗಿರುವ ರಿಕ್ಕಿ ರೈಗೆ ಈಗಾಗಲೇ ಎರಡು ಶಸ್ತ್ರ ಚಿಕಿತ್ಸೆಗಳು ಆಗಿದೆ. ಹ್ಯಾಂಡ್ ಸರ್ಜರಿ ಮಾಡಿರುವ ವೈದ್ಯರು, ಗಾಯಗೊಂಡಿರುವ ಮೂಗಿಗೆ ಪ್ಲಾಸ್ಟಿಕ್ ಸರ್ಜರಿ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ.