newsics.com
ಮಂಡ್ಯ: ಮುಂದೆ ಹೋಗುತ್ತಿದ್ದ ಕ್ಯಾಂಟರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಕೋಣನಹಳ್ಳಿ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಿ ಸಾಫ್ಟ್‌ವೇರ್ ಎಂಜಿನಿಯರ್ ಅಶ್ವಿನಿ (33) ಮೃತಪಟ್ಟರು. ಆಕೆಯ ಪತಿ ಸಾಫ್ಟ್‌ವೇರ್ ಎಂಜಿನಿಯರ್ ಶ್ರೀಕಾಂತ್ (37) ಮತ್ತು 2 ವರ್ಷದ ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರವಾಸ ಮುಗಿಸಿಕೊಂಡು ಮೈಸೂರಿನಿಂದ ಬೆಂಗಳೂರು ಕಡೆ ಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಶ್ರೀಕಾಂತ್ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಉದ್ಯೋಗದ ನಿಮಿತ್ತ ಬೆಂಗಳೂರಿನಲ್ಲಿ ವಾಸವಿದ್ದರು.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಮೈಲಿ ಫೇಸ್ ರೂಪದಲ್ಲಿ ಗೋಚರಿಸಲಿದೆ, ಚಂದ್ರ,ಶುಕ್ರ, ಶನಿ ಮಿಸ್ ಮಾಡಿಕೊಳ್ಳಬೇಡಿ