newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 12.45 ಕ್ಕೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪ್ರಕರಣ ಒಟ್ಟುಗೂಡಿಸಿ ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಏಪ್ರಿಲ್ 4 ರಂದು ವಿಚಾರಣೆ ನಡೆಸಿ ಸುಪ್ರೀಂಕೋರ್ಟ್ ತೀರ್ಪು ಕಾಯ್ದಿರಿಸಿತ್ತು
ಯಡಿಯೂರಪ್ಪ ಪರ ಸಿದ್ದಾರ್ಥ್ ಲುಥಾರಾ ವಕಾಲತ್ತು ವಹಿಸಿದ್ದಾರೆ.
ಯಡಿಯೂರಪ್ಪ ಹಾಗೂ ಆಗಿನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ವಿರುದ್ಧ ಆಲಂ ಪಾಷಾ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಸಂಚು ಆರೋಪ ಮಾಡಿದ್ದರು. ದೇವನಹಳ್ಳಿಯಲ್ಲಿ 2011 ರಲ್ಲಿ 26 ಎಕರೆ ಡಿನೋಟಿಫಿಕೇಷನ್ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸಿದಂತೆ ಸುಪ್ರೀಂ ಕೋರ್ಟ್ 2021ರ ಜನವರಿ 27 ರಂದು ಆದೇಶ ನೀಡಿತ್ತು. ಇದೀಗ ಅಂತಿಮವಾಗಿ ತೀರ್ಪು ಪ್ರಕಟವಾಗಲಿದೆ.
ಮಾಜಿ ಪ್ರೇಮಿಯಿಂದ ಬ್ಲ್ಯಾಕ್ ಮೇಲ್ : ಮದುವೆ ಸಂಭ್ರಮದಲ್ಲಿದ್ದ ಯುವತಿ ಸುಸೈಡ್