newsics.com
ಬೆಂಗಳೂರು: ರಾಜ್ಯದಲ್ಲಿ 1 ವಾರ ಬೇಸಿಗೆ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಕಡೆ ಪೂರ್ವ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ವಾರದಿಂದ ನಗರದಲ್ಲಿ ಪೂರ್ವ ಮುಂಗಾರು ಮಳೆಯ ಅಬ್ಬರ ಇದ್ದು, ನಿರಂತವಾಗಿ ಮಳೆಯಾಗುತ್ತಿದೆ.
ಭಾನುವಾರ ಬೆಳಗ್ಗೆಯಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಹಾಗೂ ಬಿಸಿಲಿನ ಕಣ್ಣಾಮುಚ್ಚಾಲೆ ಕಂಡು ಬಂತು. ಆದರೆ, ಮಧ್ಯಾಹ್ನದ ಬಳಿಕ ಪ್ರಮುಖ ಭಾಗದಲ್ಲಿ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಆರಂಭಗೊಂಡಿತ್ತು. ದೊಡ್ಡ ಪ್ರಮಾಣ ಮಳೆ ಬರುವ ನಿರೀಕ್ಷೆ ಕಂಡುಬಂತಾದರೂ, ವ್ಯಾಪಕಗಾಗಿ ಮಳೆ ಬರಲಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣ ಮಳೆ ಸುರಿದಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.ಏಪ್ರಿಲ್ 24 ರಿಂದ 26 ರವರೆಗೆ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ನಂತರ ಒಂದು ವಾರ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ.