newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು. ಇದರ ಪರಿಣಾಮವಾಗಿ ಮೂವರು ಕನ್ನಡಿಗರು ಸೇರಿ ಒಟ್ಟು 30ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಮೂಲದ ನಿವಾಸಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದರು, ಇದೀಗ ಭಯೋತ್ಪಾದಕರ ಗುಂಡಿನ ದಾಳಿಗೆ ಬೆಂಗಳೂರು ಮತ್ತಿಕೆರೆಯ ನಿವಾಸಿ ಭರತ್ ಭೂಷಣ್ ಮೃತಪಟ್ಟಿದ್ದಾರೆ. ಭರತ್ ಭೂಷಣ್ ಹಾವೇರಿಯ ರಾಣೆಬೆನ್ನೂರು ಮೂಲದವರು ಎನ್ನಲಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಭೀಕರ ದಾಳಿಯಲ್ಲಿ ವಿದೇಶಿ ಪ್ರವಾಸಿಗರು ಸೇರಿದಂತೆ ಕನಿಷ್ಠ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಲಷ್ಕರ್ ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಕಾಶ್ಮೀರದಲ್ಲಿ ಕಳೆದ 30 ವರ್ಷದಲ್ಲೇ ನಾಗರಿಕರ ಮೇಲೆ ಇಂಥ ದಾಳಿ ನಡೆದಿರಲಿಲ್ಲ ಎಂದು ಹೇಳಲಾಗಿದೆ.
ಪಿಯುಸಿಯಲ್ಲಿ ಶೇ 98 ಅಂಕ ಗಳಿಸಿದ್ದ ಮಗ: ಸಂಭ್ರಮಿಸಲು ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ರಾವ್ ಕುಟುಂಬ