newsics.com
ಶಿವಮೊಗ್ಗ: ಜಮ್ಮುಕಾಶ್ಮೀರದ ಪೇಹಲ್ಗಾಮ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಬಲಿಯಾಗಿದ್ದು, ಕನಿಷ್ಠ 12 ಪ್ರವಾಸಿಗರು ಗಾಯಗೊಂಡಿದ್ದಾರೆ
ಶಿವಮೊಗ್ಗದ ಮಂಜುನಾಥ್ ಗುಂಡಿನ ದಾಳಿಯಿಂದ ಪ್ರಾಣ ಕಳೆದುಕೊಂಡ ವ್ಯಕ್ತಿ. ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಅವರು ಪತ್ನಿ ಮತ್ತು ಮಗನೊಂದಿಗೆ ಪ್ರವಾಸಕ್ಕೆಂದು ಕಾಶ್ಮೀರಕ್ಕೆ ತೆರಳಿದ್ದರು. ಪ್ರವಾಸದ ಖುಷಿಯಲ್ಲಿದ್ದ ಮಂಜುನಾಥ್ ಸೇರಿ ಕೆಲವರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಇದರಿಂದ ಘಟನೆಯಲ್ಲಿ ಮಂಜುನಾಥ್ ಪ್ರಾಣ ಕಳೆದುಕೊಂಡಿದ್ದು, ಇನ್ನು 6 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ.