newsics.com
ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ ಮಗ ಅಭಿ ಜೈ ಶೇಕಡಾ 98 ಅಂಕವನ್ನು ಪಡೆದ ಖುಷಿಯಲ್ಲಿ ಏಪ್ರಿಲ್ 19ರಂದು ಮಂಜುನಾಥ್ ರಾವ್ ಪತ್ನಿ, ಮಗನನ್ನು ಕರೆದುಕೊಂಡು ಕಾಶ್ಮೀರ ಪ್ರವಾಸ ಕೈಗೊಂಡಿದ್ದರು 6 ದಿನಗಳ ಪ್ಯಾಕೇಜ್ ಪ್ರವಾಸ ಕೈಗೊಂಡಿದ್ದರು. ಎರಡು ದಿನಗಳ ಹಿಂದೆ ಸಂಬಂಧಿ ಅಶೋಕ್‌ಗೆ ಕರೆ ಮಾಡಿದ್ದ ಮಂಜುನಾಥ್ ಏ.24ರಂದು ವಾಪಸ್ ಬರುವುದಾಗಿ ಹೇಳಿದ್ದರು. ಆದ್ರೆ ದುರದೃಷ್ಟವಶಾತ್ ಇಂದು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.
ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಂಜುನಾಥ್, ಪತ್ನಿ ಕಡೂರು ತಾಲೂಕಿನ ಬೀರೂರು ಮ್ಯಾಮ್ ಕೋಸ್ ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಶಿವಮೊಗ್ಗದ ಮಂಜುನಾಥ್ ಅವರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.