newsics.com
ಬೆಂಗಳೂರು: ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಬೇಲೂರು, ತಿಪಟೂರು, ಬೆಳ್ತಂಗಡಿ, ಕೆಂಭಾವಿ, ಧಾರವಾಡ, ಯಡ್ರಾಮಿಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಚಂಡಮಾರುತದಿಂದಾಗಿ ಕರ್ನಾಟಕ, ಛತ್ತೀಸ್ಗಢ, ತೆಲಂಗಾಣ, ತಮಿಳುನಾಡು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.
Terror Attack ಪಹಲ್ಗಾಮ್ ದಾಳಿ, ಸೌದಿ ಪ್ರವಾಸ ತೊರೆದು ಇಂದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್!