newsics.com
ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ ಮೂಲದ ಪ್ರದೀಪ್ (40) ಬಂಧಿತ ಆರೋಪಿ.
ಮಂಗಳೂರಿನ ಮುಡಿಪು ಸ್ಟೇಟ್ ಬ್ಯಾಂಕ್ ಭಾಗದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಕಂಡಕ್ಟರ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪ್ರಯಾಣಿಕರೊಬ್ಬರ ಮೊಬೈಲ್ ನಲ್ಲಿ ಈ ವಿಡಿಯೋ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಆರೋಪಿ ಕಂಡಕ್ಟರ್ ನನ್ನು ವಶಕ್ಕೆ ಪಡೆದಿದ್ದಾರೆ. ಯುವತಿ ಬಸ್ ನಲ್ಲಿ ನಿದ್ರೆಗೆ ಜಾರಿದ್ದ ವೇಳೆ ಆಕೆ ಪಕ್ಕದಲ್ಲಿಯೇ ನಿಂತಿದ್ದ ಕಂಡಕ್ಟರ್ ಆಕೆಗೆ ಕಿರುಕುಳ ನೀಡಿದ್ದಾನೆ.
ಕಂಡಕ್ಟರ್ ಅಮಾನತು, ವಜಾಗೆ ಸಚಿವರ ಸೂಚನೆ:
ಯುವತಿ ಜತೆ ಅನುಚಿತವಾಗಿ ವರ್ತಿಸಿದ ಬಸ್ ನಿರ್ವಾಹಕನನ್ನು ಅಮಾನತುಗೊಳಿಸಿ ಆದೇಶಿಸಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಯನ್ನು ವಜಾಗೊಳಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆಯೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮೂಲಕ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಯಾಣಿಕಸ್ನೇಹಿ ಕ್ರಮ ಕೈಗೊಂಡಿದ್ದಾರೆ.
Pehalgam Attack: ಪತ್ನಿ ಜೊತೆ ಖುಷಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕೊನೆಯ ವಿಡಿಯೋ ವೈರಲ್