newsics.com
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಪ್ರಮುಖರ ಸಭೆ ನಡೆಸಿ ಪ್ರಧಾನಿ ಮೋದಿ ಮಹತ್ವದ ನಿರ್ಧಾರ ಕೈಗೊಂಡಿತ್ತು. ಪಾಕ್ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡ ಭಾರತ, ಪಾಕಿಸ್ತಾನ ಎಲ್ಲಾ ನಾಗರೀಕರ ವೀಸಾವನ್ನು ರದ್ದು ಮಾಡಿ ಕಠಿಣ ನಿರ್ಧಾರ ಕೈಗೊಂಡಿದೆ
ಈ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ವಾಯುಪ್ರದೇಶ ಬಳಕೆಗೆ ನಿರ್ಬಂಧ ವಿಧಿಸಿದೆ. ಅಲ್ಲದೇ ವಾಘಾ ಗಡಿಯನ್ನು ಬಂದ್ ಮಾಡಿದೆ.ಇನ್ನು ಮುಂದೆ ಯಾವುದೇ ಭಾರತೀಯ ವಿಮಾನಯಾನ ಸಂಸ್ಥೆಗಳು ಪಾಕಿಸ್ತಾನದ ವಾಯುಪ್ರದೇಶವನ್ನು ಬಳಸುವಂತಿಲ್ಲ.