newsics.com
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕಳೆದ ಎರಡು ದಿನಗಳ ಹಿಂದೆ ಉಗ್ರರು ಪ್ರವಾಸಿಗರ ಮೇಲೆ ಭೀಕರವಾಗಿ ಗುಂಡಿನ ದಾಳಿ ನಡೆಸಿತ್ತು. ಇದರಲ್ಲಿ 28 ಜನ್ ಬಲಿಯಾಗಿದ್ದಾರೆ. ಇಡೀ ದೇಶವನ್ನೇ ಈ ಘಟನೆ ಬೆಚ್ಚಿಬೀಳಿಸಿದೆ.
ಇದೀಗ ಪಾಕ್ ನಟ ಫವಾದ್ ಖಾನ್ ನಟಿಸಿರುವ ಅಬಿರ್ ಗುಲಾಲ್ ಚಿತ್ರ ಭಾರತದಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಲಾಗುವುದಿಲ್ಲ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಆರತಿ ಎಸ್ ಬಗ್ಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ರೊಮ್ಯಾಂಟಿಕ್ ಹಾಸ್ಯ ಚಿತ್ರ ಮೇ 9 ರಂದು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಅದಕ್ಕೂ ಮೊದಲು ನಡೆದ ಪಹಲ್ಗಾಮ್ ದಾಳಿಯಿಂದ ಚಿತ್ರವನ್ನು ನಿಷೇಧಿಸುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬೇಡಿಕೆ ಬಂದಿದೆ. ಇದರ ಬೆನ್ನಲ್ಲೇ ಇದೀಗ ಈ ಒಂದು ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.