newsics.com
ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅಂತ್ಯ ಸಂಸ್ಕಾರ ಇವತ್ತು ನೆರವೇರಲಿದೆ. ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನ ನೇರವೇರಿಸಲು ಆದೇಶ ಹೊರಡಿಸಿದೆ.
ಕಸ್ತೂರಿರಂಗನ್ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ನಂತರ 2 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನಡೆಯಲಿದೆ.
1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಸೇವೆ ಸಲ್ಲಿಸಿದ್ದಾರೆ.
Thalapathy Vijay ದಳಪತಿ ವಿಜಯ್ ನೋಡಲು ಮರದಿಂದ ಜಿಗಿದ ಅಭಿಮಾನಿ; ವಿಡಿಯೋ ವೈರಲ್ ನೋಡಿ