newsics.com
ಪಹಲ್ಗಾಮ್ ದಾಳಿಯ ಬಳಿಕ ಪಾಕ್ ಗೆ ಯುದ್ಧದ ನಡುಕವನ್ನು ಉಂಟು ಮಾಡಿದೆ. ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.
ಭಾರತವು ಯಾವುದೇ ಕ್ಷಣದಲ್ಲಿ ಪ್ರಬಲ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಬಹುದು ಎಂಬ ಭಯದಿಂದ ಪಾಕಿಸ್ತಾನಿ ಸೈನಿಕರ ಕುಟುಂಬಗಳು ಉದ್ಯೋಗಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿವೆ.
ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.
ರಾಜೀನಾಮೆ ನೀಡುವವರ ಸಂಖ್ಯೆ ಜಾಸ್ತಿಯಾಗುತ್ತಿದ್ದಂತೆ ಪಾಕ್ ಸೇನೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದೆ. ಸೇನೆಯ ನಿಯಮವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪಾಕಿಸ್ತಾನ ಸೇನಾ ಕಾಯ್ದೆ(1952) ಅಡಿ ಕ್ರಮ ಜರುಗಿಸಲಾಗುವುದು ಎಂದು ವಾರ್ನಿಂಗ್ ನೀಡಿದೆ.