Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Munirathna ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ
ಕರ್ನಾಟಕಪ್ರಮುಖ

Munirathna ಮುನಿರತ್ನ ವಿರುದ್ಧದ ಪ್ರಕರಣದ ಚಾರ್ಜ್ಶೀಟ್ ಸಲ್ಲಿಕೆ: ಅಶ್ಲೀಲ ಫೋಟೊ, ವಿಡಿಯೋ ಮಾಡಿದ್ದು ಬಹಿರಂಗ

Share
2 Min Read
SHARE

newsics.com

ಬೆಂಗಳೂರು: ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.

ಶಾಸಕ ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಒಟ್ಟು 3 ಸಾವಿರ ಪುಟಗಳ ಚಾರ್ಜ್ಶೀಟ್ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್ಶೀಟ್ನಿಂದ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್ಮೇಲ್ ಮಾಡಿದ ಬಗ್ಗೆಯೂ ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನಾಯಕರ ಅಶ್ಲೀಲ ಫೋಟೋ ತೋರಿಸುವಂತೆ ಹೇಳಿರುವುದನ್ನೂ ಉಲ್ಲೇಖಿಸಲಾಗಿದೆ. ಎಚ್ಐವಿ ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬರೋಬ್ಬರಿ 63 ಪ್ರಶ್ನೆಗಳನ್ನು ಮುನಿರತ್ನ ಮುಂದಿಡಲಾಗಿತ್ತು.

ಮುನಿರತ್ನ ವಿರುದ್ಧ ಐಪಿಸಿ ಕಲಂ 354(ಎ),354(ಸಿ), 376(2)(ಎನ್),308, 270,120ಬಿ,119,504,506,201,511, ರೆ/ವಿ 34 ಐಪಿಸಿ, ಕಲಂ 66ಇ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು.

ಎನಿದು ಮುನಿರತ್ನ ವಿರುದ್ಧದ ಪ್ರಕರಣ?

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣವನ್ನು ಶಾಸಕ ಮುನಿರತ್ನ ಎದುರಿಸುತ್ತಿದ್ದಾರೆ. ಈ ಪೈಕಿ ಅವರ ವಿರುದ್ಧದ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಯತ್ನದ ಆರೋಪ ಬಹಳ ಗಂಭೀರ ಸ್ವರೂಪ ಪಡೆದುಕೊಂಡಿತ್ತು. ಮುನಿರತ್ನ ನಾಯ್ಡು ಬಳಿ ಹಲವರ ಖಾಸಗಿ ಅಶ್ಲೀಲ ವಿಡಿಯೋಗಳಿವೆ. ಮುನಿರತ್ನ ಅನೇಕ ಮಂದಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಅವರನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ರಾಜಕೀಯ ಎದುರಾಳಿಗಳನ್ನು ಮಣಿಸಲು ಅವುಗಳನ್ನು ಬಳಕೆ ಮಾಡುತ್ತಿದ್ದರು ಎಂದು ಸಂತ್ರಸ್ತೆ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಈ ಪ್ರಕರಣ ರಾಜಕೀಯವಾಗಿಯೂ ಕರ್ನಾಟಕದಲ್ಲಿ ಬಹಳಷ್ಟು ಸದ್ದು ಮಾಡಿತ್ತು. ತಮ್ಮ ವಿರುದ್ಧದ ಆರೋಪಗಳನ್ನು ಅಲ್ಲಗಳೆದಿರುವ ಮುನಿರತ್ನ ಕಾಂಗ್ರೆಸ್ ನಾಯಕರ, ಅದರಲ್ಲಿಯೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪಗಳನ್ನು ಮಾಡಿದ್ದರು. ರಾಜಕೀಯವಾಗಿ ಮುಗಿಸಲು ಡಿಕೆ ಶಿವಕುಮಾರ್ ಕುತಂತ್ರ ಹೂಡಿದ್ದಾರೆ ಎಂದು ಅವರು ದೂರಿದ್ದರು.

ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ

TAGGED:Chargesheet filed in case against Munirathna: Obscene photosvideos revealed
Share This Article
Facebook Twitter Copy Link Print
Previous Article ಹಣದ ಆಸೆಗೆ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡ ಯುವಕ
Next Article ಪ್ರೇಯಸಿಯನ್ನು ಭೇಟಿಯಾಗಲು ನಡುರಾತ್ರಿ ಮನೆಗೆ ಹೋದ 16 ವರ್ಷದ ಯುವಕ – ಮುಂದೇನಾಯ್ತು ನೀವೇ ನೋಡಿ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?