ಬೆಂಗಳೂರು : ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭಾವಿಸಿದ್ದು, ಟಿಪ್ಪರ್ ಡಿಕ್ಕಿಯಾಗಿ ಪೌರಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನ ಶಿವನಗರ ಫ್ಲೈ ಓವರ್ ಬಳಿ ನಡೆದಿದೆ.
ಮೃತ BBMP ಪೌರ ಕಾರ್ಮಿಕ ಮಹಿಳೆಯನ್ನು ಸರೋಜಾ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ಶವ ರವಾನಿಸಲಾಗಿದೆ. ವಿಜಯನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.