Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ
ಕರ್ನಾಟಕ

ಬೇಸಿಗೆಗೆ ಬತ್ತಿದ ಕೆರೆ, ಜಲಾಶಯಗಳು -ರಾಜ್ಯದ ಜಲಮೂಲಗಳಲ್ಲಿ ನೀರಿನ ಕೊರತೆ

Share
1 Min Read
SHARE

newsics.com

ಕರ್ನಾಟಕದಲ್ಲಿ ಬಿಸಿಲಿನ ಬೇಗೆಗೆ ಕೆರೆ, ಜಲಾಶಯ ಖಾಲಿಯಾಗಿದ್ದು, ನೀರಿನ ಕೊರತೆ ಉಂಟಾಗಿದೆ. 42 ಸಾವಿರ ಕೆರೆಗಳ ಪೈಕಿ 17 ಸಾವಿರ ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು ಶೇಖರಣೆಯಾಗಿದ್ದು, ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ಕಳೆದ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಾಗಿ ರಾಜ್ಯದ ಜಲಮೂಲಗಳು ತುಂಬಿದ್ದವು. ಇದರಿಂದ ನೀರಿನ ಸಮಸ್ಯೆ ಎದುರಾಗಲ್ಲ ಅಂದುಕೊಂಡಿತ್ತು. ಅದರೆ, ಏಪ್ರಿಲ್‌ ಮಧ್ಯಭಾಗದಲ್ಲಿಯೇ ರಾಜ್ಯದ ಒಟ್ಟು ಕೆರೆಗಳ ಪೈಕಿ ಶೇ.35ರಷ್ಟು ಕೆರೆಗಳಲ್ಲಿ ಶೇ. 30ಕ್ಕಿಂತ ಕಡಿಮೆಯಿದೆ.

ರಾಜ್ಯದಲ್ಲಿ ಒಟ್ಟಾರೆ 41,875 ಕೆರೆಗಳಿವೆ. ಅವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ವಹಣೆಯಲ್ಲೇ 32,068 ಕೆರೆಗಳಿವೆ. ಉಳಿದಂತೆ ಸಣ್ಣ ನೀರಾವರಿ ಇಲಾಖೆ ನಿರ್ವಹಣೆಯಲ್ಲಿ 3,778, ಜಲಸಂಪನ್ಮೂಲ ಇಲಾಖೆ ಅಡಿ 2,048, ಬಿಬಿಎಂಪಿ, ಬಿಡಿಎ ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯಲ್ಲಿ 1,285 ಹಾಗೂ ಅರಣ್ಯ, ಕಂದಾಯ ಸೇರಿದಂತೆ ಇನ್ನಿತರ ಇಲಾಖೆಗಳ ಸುಪರ್ದಿಯಲ್ಲಿ 2,696 ಕೆರೆಗಳಿವೆ. ಆ ಕೆರೆಗಳ ಪೈಕಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ವಹಣೆಯಲ್ಲಿರುವ 14,285 ಕೆರೆಗಳಲ್ಲಿ ಶೇ. 30ಕ್ಕಿಂತ ಕಡಿಮೆ ನೀರು ಶೇಖರಣೆಯಾಗಿದೆ. ಉಳಿದಂತೆ ಸಣ್ಣ ನೀರಾವರಿ ಇಲಾಖೆ ಕೆರೆಗಳಲ್ಲಿ 1,443, ಜಲಸಂಪನ್ಮೂಲ ಇಲಾಖೆ ಕೆರೆಗಳಲ್ಲಿ 344, ಬಿಬಿಎಂಪಿ, ಬಿಡಿಎ ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಿರ್ವಹಣೆಯ 588 ಕೆರೆಗಳಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಿದೆ. ಒಟ್ಟಾರೆ 16,660 ಕೆರೆಗಳಲ್ಲಿ ಶೇಖರಣೆಯಾಗಿರುವ ನೀರಿನ ಪ್ರಮಾಣ ಶೇ.30ಕ್ಕಿಂತ ಕಡಿಮೆಯಿದೆ.

123 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆ ಸಾಮರ್ಥ್ಯವಿರುವ ಆಲಮಟ್ಟಿ ಜಲಾಶಯದಲ್ಲಿ ಕೇವಲ 8 ಟಿಎಂಸಿ ಅಡಿ, 105 ಟಿಎಂಸಿ ಅಡಿ ನೀರು ಶೇಖರಣೆ ಮಾಡಬಹುದಾದ ತುಂಗಭದ್ರಾ ಜಲಾಶಯದಲ್ಲಿ 1.39 ಟಿಎಂಸಿ ಅಡಿ, 49.45 ಟಿಎಂಸಿ ಅಡಿಗಳಷ್ಟು ನೀರು ಶೇಖರಣೆ ಸಾಮರ್ಥ್ಯದ ಕೃಷ್ಣರಾಜಸಾಗರ ಜಲಾಶಯದಲ್ಲಿ 11.78 ಟಿಎಂಸಿ ಅಡಿಗಳಷ್ಟು ಮಾತ್ರ ನೀರು ಬಳಕೆ ಮಾಡಬಹುದಾಗಿದೆ.

TAGGED:#Lakes #reservoirs #dried #summer #karantaka
Share This Article
Facebook Twitter Copy Link Print
Previous Article Rajesh krishnan: ರಾಜೇಶ್‌ ಕೃಷ್ಣನ್‌ಗೆ ಅಮೇರಿಕಾದಿಂದ ಅತ್ಯುನ್ನತ ಗೌರವ
Next Article Nayanatara ಮೆಗಾ ಸ್ಟಾರ್‌ ಚಿರಂಜೀವಿ ಜೊತೆ ನಟಿಸಲು ದುಬಾರಿ ಸಂಭಾವನೆ ಕೇಳಿದ ನಯನತಾರ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?