newsics.com
ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ವಿಜಯ ದಿನದ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗುವ ಸಾಧ್ಯತೆ ಇದೆ.
ಮೇ 9 ರಂದು ಮಾಸ್ಕೋದಲ್ಲಿ ನಡೆಯಲಿರುವ ವಿಜಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ರಷ್ಯಾ ಬುಧವಾರ ದೃಢಪಡಿಸಿದೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೇ 9 ರಂದು ನಡೆಯುವ ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಇನ್ನು ಕ್ಸಿ ಜಿನ್‌ಪಿಂಗ್ ಪ್ರತ್ಯೇಕ ಭೇಟಿ ನೀಡಲಿದ್ದಾರೆ, ಅದಕ್ಕೆ ನಾವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ ಮತ್ತು ಅದಕ್ಕಾಗಿ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಕ್ರೆಮ್ಲಿನ್ ವಕ್ತಾರರು ಮಾಸ್ಕೋದಲ್ಲಿ ಮಾಧ್ಯಮಗಳಿಗೆ ತಿಳಿಸಿದರು.