newsics.com
ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ಅಧ್ಯಕ್ಷರ ಪತ್ರಿಕಾ ಕಾರ್ಯದರ್ಶಿ ಡಿಮಿಟ್ರಿ ಪೆಸ್ಕೋವ್ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧದ ವಿಜಯದ ಭಾಗವಾಗಿ ಮೇ.9ರಂದು ನಡೆಯುವ 80ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಬೇಕಿತ್ತು. ‘ಕಾರ್ಯಕ್ರಮಕ್ಕೆ ಭಾರತದ ನಾಯಕರು ಬರುವುದಿಲ್ಲ. ಭಾರತವು ಉನ್ನತ ಮಟ್ಟದಲ್ಲಿ ಪ್ರಾತಿನಿಧ್ಯವನ್ನು ಹೊಂದಿರುವುದಿಲ್ಲʼ ಎಂದು ಪೆಸ್ಕೋವ್ ಹೇಳಿದ್ದಾರೆ. ಆದರೆ ಭಾರತವು ವಿಕ್ಟರಿ ಡೇ ಆಚರಣೆಗೆ ಉನ್ನತ ಮಟ್ಟದ ನಿಯೋಗವನ್ನು ಕಳುಹಿಸದಿರಲು ನಿರ್ಧರಿಸಿದೆ.
ಪ್ರಧಾನಿಯವರ ನಿರ್ಧಾರದ ಹಿಂದಿನ ಕಾರಣವನ್ನು ಆಲ್ಡೋ ರಷ್ಯಾದ ಅಧಿಕಾರಿಗಳು ನಿರ್ದಿಷ್ಟಪಡಿಸಿಲ್ಲ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇದನ್ನು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.