newsics.com
ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿದಿದೆ. 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮೇ 6ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಕಲಬುರಗಿ ಹಾಗೂ ಗದಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.