newsics.com
ಮೇಘಾ ಶೆಟ್ಟಿ ಹೊಸ ಅವತಾರದಲ್ಲಿ ಫ್ಯಾನ್ಸ್ ಎದುರು ಬಂದಿದ್ದಾರೆ. ಮೇಘಾ ಶೆಟ್ಟಿ ಹೊಸ ಹೊಸ ಫೋಟೋಗಳ ಮೂಲಕ ಮಿಂಚುತ್ತಿದ್ದಾರೆ. ಇದೀಗ ಅವರ ಹೊಸ ಫೋಟೋಗಳು ಎಲ್ಲರ ಗಮನ ಸೆಳೆಯುವಂತಿದೆ.
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಸೀರಿಯಲ್ ಮೂಲಕ ಹೆಸರು ಮಾಡಿದ್ದ ನಟಿ ಮೇಘಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಮೇಘಾ ಶೆಟ್ಟಿ ಅವರು ʼಮುದ್ದು ಸೊಸೆʼ ಧಾರಾವಾಹಿಯ ನಿರ್ಮಾಣ ಮಾಡಿದ್ದಾರೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್‌ಪಿ ಕೂಡ ಬರುತ್ತಿದೆ. ಈ ಖುಷಿಯ ನಡುವೆ ಅವರು ವಿದೇಶಿ ಪ್ರವಾಸ ಮಾಡಿದ್ದಾರೆ.
ಮೇಘಾ ಶೆಟ್ಟಿ ಅವರು ಸಿಂಗಾಪುರದಲ್ಲಿ ಬ್ಲ್ಯಾಕ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಬಾಲಿವುಡ್ ನಟಿಯಂತೆ ಅವತಾರ ತಾಳಿ ಫೋಟೋಗೆ ಪೋಸ್ ನೀಡಿದ್ದಾರೆ.
ಮೇಘಾ ಶೆಟ್ಟಿ ಅವರು ಸಿಂಗಾಪುರದ ಸುಂದರ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಸುಂದರ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಮೇಘಾ ಶೆಟ್ಟಿ ಕಿರುತೆರೆ ಮೂಲಕ ಜನಪ್ರಿಯತೆ ಪಡೆದವರು. ನಂತರ ಸಿನಿಮಾಗಳಲ್ಲೂ ಅವರು ನಟಿಸಿದರು. ‘ತ್ರಿಬಲ್ ರೈಡಿಂಗ್’ ಮೊದಲಾದ ಚಿತ್ರಗಳಲ್ಲಿ ಮೇಘಾ ಶೆಟ್ಟಿ ನಟಿಸಿದ್ದಾರೆ.
https://www.instagram.com/p/DJEW7kqv-N_/?igsh=cDZzMHB3Y2pxbHA=