newsics.com
ರಾಮನಗರ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಮೇಲೆ ಗುಂಡಿನ ದಾಳಿ ನಡೆಸಿದಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.7ರ ಬುಧವಾರದಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈ ಗೆ ಬಿಡದಿ ಪೊಲೀಸರು ನೋಟಿಸ್ ನೀಡಿದ್ದಾರೆ.
2 ಆಪರೇಷನ್‌ಗಳಿಗೆ ಒಳಗಾಗಿದ್ದ ರಿಕ್ಕಿ ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಂಧಿತ ಗನ್‌ಮ್ಯಾನ್ ವಿಠ್ಠಲ್ ಫೈರಿಂಗ್ ಮಾಡಿರುವ ಶಂಕೆ ಇದ್ದು, ಘಟನೆ ಸಂಬಂಧ ವಿಚಾರಣೆಯಲ್ಲಿ ವಿಠ್ಠಲ್ ಯಾವುದೇ ಸತ್ಯ ಬಾಯ್ಬಿಡುತ್ತಿಲ್ಲ. ಹೀಗಾಗಿ ರಿಕ್ಕಿ ರೈ ಹಾಗೂ ಆರೋಪಿ ವಿಠ್ಠಲ್ ಮುಖಾಮುಖಿ ವಿಚಾರಣೆ ನಡೆಸಲು ಪೊಲೀಸರ ಸಿದ್ಧತೆ ನಡೆಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಿವಂಗತ ಮುತ್ತಪ್ಪ ರೈ ಅವರ ಎರಡನೇ ಪತ್ನಿಗೂ ಪೊಲೀಸರು ನೋಟಿಸ್ ನೀಡಿದ್ದರು. ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು. ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದರು.