newsics.com
ರಾಯಚೂರು : ಯುವಕನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಹತ್ತಿರದ ಉದ್ಯಾನವನ ಬಳಿ ನಡೆದಿದೆ.
ಕೊಲೆಯಾದ ಯುವಕನನ್ನು ಇಂದಿರಾನಗರದ ನಿವಾಸಿ ವೀರೇಶ್ (26) ಎಂದು ಗುರುತಿಸಲಾಗಿದೆ.
ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಕೃತ್ಯದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.