newsics.com
ಬೆಂಗಳೂರು : ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಹೆಚ್ಚು ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.