newsics.com
ಬೆಂಗಳೂರು: ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಕಾಯುತ್ತಿದ್ದ ಆ ದಿನ ಕೊನೆಗೂ ಬಂದೇಬಿಟ್ಟಿದೆ. 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ
ಮಾ.21 ರಿಂದ ಏ.4 ರವರೆಗೆ ರಾಜ್ಯಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು. ರಾಜ್ಯದಲ್ಲಿ ಒಟ್ಟು 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.ಈ ಬಾರಿ 66.14 ರಷ್ಟು ಫಲಿತಾಂಶ ಬಂದಿದೆ
https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಸದ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಮಾತಿಹಿ ನೀಡಿದ್ದಾರೆ.