newsics.com
ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ
ಪರೀಕ್ಷೆಯಲ್ಲಿ ಆರು ವಿಷಯದಲ್ಲಿ ಫೇಲ್ ಆದರೂ ಆತ್ಮಸ್ಥೈರ್ಯ ಕುಗ್ಗಬಾರದು ಎಂಬ ಎಂಬ ಕಾರಣಕ್ಕೆ ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್ ತಿನ್ನಿಸಿದ್ದಾರೆ
ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್ ಆಗಿದ್ದ.
ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು ಕೇಕ್ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ. 15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ಅಭಿಷೇಕ್ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಇದರಿಂದಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ಅಭಿಷೇಕ್‌ಗೆ ಸಾಧ್ಯವಾಗಿಲ್ಲ.
ಫೇಲ್ ಆದರೂ ಧೈರ್ಯ ತುಂಬಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ನಾನು ಪರೀಕ್ಷೆಯಲ್ಲಿ ಫೇಲ್ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ ಎಂದು ಅಭಿಷೇಕ್ ಹೇಳಿದ್ದಾನೆ.