newsics.com
ಮಂಗಳೂರು:ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿವೆ. ಈ ಮದ್ಯೆ ಮಂಗಳೂರಿನ ಹೃದಯ ಭಾಗವಾದ ಹಂಪನಕಟ್ಟೆ ಬಳಿ ಇಂದು ಬೆಳಗ್ಗೆ ಉದ್ರಿಕ್ತ ಗುಂಪೊಂದು ಏಕಾಏಕಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದೆ. ಈ ಕೃತ್ಯದಿಂದಾಗಿ ಕನಿಷ್ಠ ಮೂರು ಬಸ್‌ಗಳ ಗಾಜುಗಳು ಪುಡಿಯಾಗಿದ್ದು, ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.
ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ನ ಫಾಜಿಲ್ ಎಂಬಾತನ ಹತ್ಯೆ ಮಾಡಲಾಗಿತ್ತು. ಇದೇ ಸೇಡಿಗೆ ಈಗ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನಲಾಗುತ್ತಿದೆ