newsics.com
ಬೆಂಗಳೂರು:ಖಾಸಗಿ ಆಸ್ಪತ್ರೆಯ ಆಂಬ್ಯುಲೆನ್ಸ್ ಅಡ್ಡಾದಿಡ್ಡಿಯಾಗಿ ಚಲಿಸಿ ಸರಣಿ ಅಪಘಾತ ಸಂಭವಿಸಿದ್ದು, ತಳ್ಳುವ ಗಾಡಿ ಹಣ್ಣಿನ ವ್ಯಾಪಾರಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.
ಈ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿದ್ದಾಪುರದ ರಾಘವೇಂದ್ರ ಕಾಲೋನಿಯ ಸಿ.ರಮೇಶ್ (48) ಮೃತ ದುರ್ದೈವಿ. ಘಟನೆಯಲ್ಲಿ ಆಂಬ್ಯುಲೆನ್ಸ್, ಆಟೋ, ಸ್ಕೂಟರ್ ಹಾಗೂ ಎರಡು ತಳ್ಳುವ ಗಾಡಿಗಳು ಜಖಂಗೊಂಡಿವೆ.
ಶಾಂತಿನಗರದ ಸಮೀಪ ಆಸ್ಪತ್ರೆಗೆ ರೋಗಿ ಕರೆ ತರಲು ಅವಸರದಲ್ಲಿ ಅತಿವೇಗವಾಗಿ ಬಿಟಿಎಸ್ ರಸ್ತೆಯಲ್ಲಿ ಆಂಬ್ಯುಲೆನ್ಸ್ ತೆರಳುವಾಗ ಗುರುವಾರ ರಾತ್ರಿ ಈ ಸರಣಿ ಅಪಘಾತ ನಡೆದಿದೆ. ಆರೋಪಿ ಆಂಬ್ಯುಲೆನ್ಸ್ ಚಾಲಕನನ್ನು ಬಂಧಿಸಲಾಗಿದೆ.