newsics.com
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಿದೆ.
ಪಾಕ್ ಗೆ ಬಿಸಿ ಮುಟ್ಟಿಸುವ ಸಲುವಾಗಿ ಭಾರತ ಸರ್ಕಾರ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದೆ. ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದ್ದು, ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದೆ.
ಪಾಕಿಸ್ತಾನದಿಂದ ವಾಯು ಮತ್ತು ಮೇಲ್ಮೈ ಮಾರ್ಗಗಳ ಮೂಲಕ ಬರುವ ಎಲ್ಲಾ ವರ್ಗದ ಒಳಬರುವ ಮೇಲ್ ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಭಾರತ ಶನಿವಾರ ಸ್ಥಗಿತಗೊಳಿಸಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್ಟಿ) ಪಾಕಿಸ್ತಾನದಿಂದ ಭಾರತಕ್ಕೆ ಬರುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದೆ.