newsics.com
ಬೆಂಗಳೂರು: ವಕೀಲ ಜಗದೀಶ್ ಅವರ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ-ಕನಕಪುರ ನೈಸ್ ರಸ್ತೆಯಲ್ಲಿ ಪತ್ತೆಯಾಗಿದೆ.
ಕಾರು ಟಚ್ ಆದ ವಿಚಾರಕ್ಕೆ ಗಲಾಟೆಯಾಗಿ ಮರ್ಡರ್ ನಡೆದಿದೆಯಾ ಅಥವಾ ಉದ್ದೇಶ ಪೂರ್ವಕವಾಗಿ ಕೊಲೆ ಮಾಡಲಾಗಿದ್ಯಾ? ಎಂಬ ಅನುಮಾನ ಶುರುವಾಗಿದೆ.
ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಲವು ಆಯಾಮಗಳಲ್ಲಿ ವಕೀಲ ಜಗದೀಶ್ ಅವರ ಸಾವಿನ ತನಿಖೆ ಮಾಡುತ್ತಿದ್ದಾರೆ. ಘಟನೆ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕೊಲೆಯಾದ ಬಗ್ಗೆ ಅನುಮಾನ ವ್ಯಕ್ತವಾಗಿದೆ.