newsics.com
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದು, 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಕೆ ಆರ್ ನಗರದಲ್ಲಿ ಹೋಟೆಲ್ ಉದ್ಯಮವನ್ನು ನಡೆಸುತ್ತಿದ್ದ ಸುಹಾಸ್ ಶೆಟ್ಟಿ ಕುಟುಂಬ ಐದಾರು ವರ್ಷಗಳ ಹಿಂದೆ, ಮಂಗಳೂರಿಗೆ ಬಂದು ನೆಲೆಸಿದ್ದರು.
ಗುರುವಾರ ರಾತ್ರಿ ಸುಹಾಸ್ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ, ಮೀನಿನ ಗೂಡ್ಸ್ ಟೆಂಪೋ ಮತ್ತು ಸ್ವಿಫ್ಟ್ ಕಾರೊಂದು ಅವರನ್ನು ಹಿಂಬಾಲಿಸಿಕೊಂಡು ಬಂದಿತ್ತು. ಕಿನ್ನಿಪದವು ಬಳಿ ಮೀನಿನ ಟೆಂಪೋ ಇನ್ನೋವಾ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿದ್ದು, ಇದರಿಂದ ಕಾರು ರಸ್ತೆ ಬದಿಯ ಸಲೂನ್ ಶಾಪ್‌ಗೆ ನುಗ್ಗಿದೆ.ತಕ್ಷಣವೇ ಸ್ವಿಫ್ಟ್ ಕಾರಿನಿಂದ ಇಳಿದ ದುಷ್ಕರ್ಮಿಗಳು ಲಾಂಗು ಮತ್ತು ತಲ್ವಾರ್‌ಗಳಿಂದ ಸುಹಾಸ್‌ನನ್ನು ಗುರಿಯಾಗಿಸಿ ಮಾರಣಾಂತಿಕವಾಗಿ ದಾಳಿ ನಡೆಸಿದ್ದಾರೆ. ಈ ಭೀಕರ ದಾಳಿಯಿಂದ ಸುಹಾಸ್ ಶೆಟ್ಟಿಯ ತಲೆ, ಕೈ, ಕಾಲು, ಮತ್ತು ದೇಹದಾದ್ಯಂತ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.