newsics.com
ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಅಬ್ಬರ ಶುರುವಾಗಿದೆ. ಬೆಂಗಳೂರಲ್ಲಿ ಮುಂದಿನ 24 ಗಂಟೆ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಮಿಂಚು – ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸಣ್ಣ ಮಳೆಗೆ ತತ್ತರಿಸೋ ಸಿಲಿಕಾನ್ ಸಿಟಿಗೆ ಆರೆಂಜ್ ಅಲರ್ಟ್ ಘೋಷಣೆ ಆಗಿದೆ.ಮೇ 7 ಹಾಗೂ 8 ರಂದು ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇದೆ.
ಗುಡುಗು ಸಹಿತ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ 30 ರಿಂದ 40 ಕಿಮೀ ಇರುತ್ತದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ,ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ತುಮಕೂರು, ಬೆಂ. ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಗಳಲ್ಲಿ ಮಳೆಯಾಗಲಿದೆ.