newsics.com
ಚಿತ್ರದುರ್ಗ : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ರೋಚಕ ಜಯ ಸಾಧಿಸಿತು. ಆರ್‌ಸಿಬಿ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳು ವಿರಾಟ್ ಕೊಹ್ಲಿ ಕಟ್ ಔಟ್ ಮುಂದೆ ಮೇಕೆ ಬಲಿ ಕೊಟ್ಟಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಮರಿಯಮ್ಮನಹಳ್ಳಿ ನಡೆದಿತ್ತು
ಇದೀಗ ಮೂವರು ಆರ್ಸಿಬಿ ಅಭಿಮಾನಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಸಣ್ಣ ಪಾಲಯ್ಯ (22), ಜಯಣ್ಣ (23) ಮತ್ತು ತಿಪ್ಪೆಸ್ವಾಮಿ (28) ಎಂದು ಗುರುತಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 20 ಸೆಕೆಂಡುಗಳ ವೈರಲ್ ವೀಡಿಯೊದಲ್ಲಿ, ವಿರಾಟ್ ಕೊಹ್ಲಿ ಅವರ ಪೋಸ್ಟರ್ ಮುಂದೆ ಯುವಕನೊಬ್ಬ ಮೇಕೆಯನ್ನು ಹಿಡಿದುಕೊಂಡಿರುವುದು ಕಂಡುಬಂದಿದೆ. ಎರಡನೇ ಯುವಕ ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಜಯ ಸಾಧಿಸಿದೆ ಎಂದು ಘೋಷಿಸುತ್ತಿದ್ದಂತೆ, ಮೂರನೇ ಯುವಕ ಮಚ್ಚಿನಿಂದ ಆಡಿನ ಕುತ್ತಿಗೆಯನ್ನು ಕತ್ತರಿಸುತ್ತಾನೆ. ಇದಾದ ನಂತರ, ವಿರಾಟ್ ಕೊಹ್ಲಿ ಅವರ ಪೋಸ್ಟರ್ ಮೇಲೆ ಆಡಿನ ರಕ್ತವನ್ನು ರಕ್ತಾಭಿಷೇಕ ಎಂದು ಅರ್ಪಿಸಲಾಗುತ್ತದೆ. ಈ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಬಳಕೆದಾರ ‘call-me-143-kalki’ ಪೋಸ್ಟ್ ಮಾಡಿದ್ದಾರೆ. ಇನ್ನು ವಿಡಿಯೋ ಭಾರೀ ವೈರಲ್ ಆಗಿದೆ.