newsics.com
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ ಜಾಲತಾಣದಲ್ಲಿ ಪೋಸ್ಟ್ಗಳ ಹರಿದಾಡುತ್ತಿದೆ. ಇದರ ಬೆನ್ನಲ್ಲೇ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ.
ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುತ್ತೇವ ಎಂದು ಭರತ್ ಕುಮ್ಡೇಲ್ ಹೆಸರು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಅಲರ್ಟ್ ಆಗಿದ್ದರು. ಹೀಗಾಗಿ, ಸೋಮವಾರವೇ ಮಂಗಳೂರು ನಗರದಲ್ಲಿ ಹೋಟೆಲ್, ಪಬ್, ಬಾರ್ಗಳು, ಫುಟ್ಪಾತ್ ವ್ಯಾಪಾರವನ್ನು ರಾತ್ರಿ 9.30 ರ ಒಳಗೆ ಬಂದ್ ಮಾಡಿಸಲಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.