newsics.com
ನವದೆಹಲಿ : ಪಹಲ್ಗಾಮ್ ಮೇಲೆ ಭಯೋತ್ಪಾದಕರು ಮಾಡಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಭಾರತೀಯ ಸೇನೆ ದಾಳಿ ನಡೆಸಿದ್ದು, 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಜಮ್ಮು-ಕಾಶ್ಮೀರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಫೇಲ್ ಜೆಟ್ಗಳು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಶಿಬಿರಗಳನ್ನು ‘ಸ್ಕ್ಯಾಲ್ಪ್ ಕ್ಷಿಪಣಿಗಳು’ ಬಳಸಿ ಹೊಡೆದು ಹಾಕಿವೆ.ಭಯೋತ್ಪಾದಕರ ಒಂಬತ್ತು ಗುರಿಗಳ ಮೇಲೆ ಭಾರತೀಯ ಸೇನಾ ಪಡೆಗಳು ನಡೆಸಿದ ದಾಳಿಯಲ್ಲಿ ಹ್ಯಾಮರ್ ಬಾಂಬ್ಗಳನ್ನು ಸಹ ಬಳಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಿದ ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್ ನಾಯಕತ್ವದ ಉನ್ನತ ನಾಯಕರನ್ನು ಗುರಿಯಾಗಿಸುವ ಉದ್ದೇಶದಿಂದ ಪಡೆಗಳು ದಾಳಿಗೆ ಸ್ಥಳವನ್ನು ಆಯ್ಕೆ ಮಾಡಿದ್ದವು.
ಇಡೀ ಜಗತ್ತು ನಿದ್ರಿಸುತ್ತಿರುವಾಗ, ಭಾರತೀಯ ಸೇನೆಯು ಪಾಕಿಸ್ತಾನದೊಳಗಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ಬಾಂಬ್‌ಗಳ ಮಳೆಗರೆಸಿದೆ. ಇದು ಭಾರತದ ಗಡಿಯಿಂದ ಸುಮಾರು 200 ಕಿ.ಮೀ ದೂರದಲ್ಲಿದೆ. ಇದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿದೆ ಮತ್ತು ಜೈಶ್-ಎ-ಮೊಹಮ್ಮದ್ ಮತ್ತು ಲಷ್ಕರ್‌ನ ಪ್ರಧಾನ ಕಚೇರಿಯನ್ನು ಹೊಂದಿದೆ.