newsics.com
ನವದೆಹಲಿ: ಕಾಶ್ಮೀರದ ಪಹಲ್ಗಾಮ್ನ ಬೈಸರನ್ ಕಣಿವೆಯಲ್ಲಿ 26 ಮುಗ್ಧ ಪ್ರವಾಸಿಗರನ್ನು ಕ್ರೂರವಾಗಿ ಗುಂಡಿಕ್ಕಿ ಕೊಂದ ದುರಂತ ಘಟನೆ ನಡೆದ ಎರಡು ವಾರಗಳ ನಂತರ ಭಾರತ ಅಂತಿಮವಾಗಿ ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದೆ.
ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ ಆಗಿದೆ. ಇನ್ನೂ, ಭಾರತೀಯ ಸೇನೆ, ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 23 ನಿಮಿಷದಲ್ಲೇ 80ಕ್ಕೂ ಹೆಚ್ಚು ಮಂದಿ ಉಗ್ರರು ಮೃತಪಟ್ಟಿದ್ದಾರೆ.
ಇದೀಗ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದ ನಂತರ, ನೆರೆಯ ದೇಶವು ಮಂಡಿಯೂರಿದೆ. ಈ ಕಾರ್ಯಾಚರಣೆಯ ನಂತರ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತ ಕಾರ್ಯಾಚರಣೆಯನ್ನು ನಿಲ್ಲಿಸಿದ್ರೆ ತನ್ನ ಸೇನೆಯು ಹಿಂದೆ ಸರಿಯಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದೊಳಗಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯ ನಂತರ, ಅಲ್ಲಿ ವ್ಯಾಪಕ ವಿನಾಶ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.