newsics.com
ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್ ದಾಳಿ ಮಾಡಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ವಿಮಾನ ಸಂಚಾರ ರದ್ದು ಮಾಡಲಾಗಿದೆ. ಪಂಜಾಬ್ ನ ಅಮೃತಸರ, ಚಂಡೀಗಢ ವಿಮಾನ ನಿಲ್ದಾಣ, ಗುಜರಾತ್ ನ ರಾಜ್ ಕೋಟ್, ಭುಜ್ ವಿಮಾನ ನಿಲ್ದಾಣ, ಜಾಮ್ ನಗರ ವಿಮಾನ ನಿಲ್ದಾಣಗಳನ್ನು ಮಧ್ಯಾಹ್ನ 12 ಗಂಟೆಯವರೆಗೆ ಬಂದ್ ಮಾಡಲಾಗಿದೆ.
ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ (PoK) ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಏರ್ ಸ್ಟ್ರೈಕ್ (Air Strike) ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ