newsics.com
ಮಂಗಳೂರು: ಆಪರೇಷನ್ ಸಿಂಧೂರ ಕಾರ್ಯಾಚರಣೆ ನಂತರ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ.
ಇನ್ನೂ ಮಂಗಳೂರಿನ ಕಡಲ ತೀರದಲ್ಲಿ ಕರಾವಳಿ ಕಾವಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ತೀವ್ರ ನಿಗಾ ವಹಿಸಿರುವ ಕರಾವಳಿ ಕಾವಲು ಪಡೆ ಪೊಲೀಸರು ಮಂಗಳೂರಿನ ಬಂದರು ಕಡಲ ತೀರದಲ್ಲಿ ಪರಿಶೀಲನೆ ನಡೆಸಿದ್ದಾರೆ.